ಉತ್ತರ ಪ್ರದೇಶ ಸೇರಿ ಪಂಚರಾಜ್ಯಗಳಿಗೆ ಚುನಾವಣೆ| ಇಂದು ವೇಳಾಪಟ್ಟಿ ಪ್ರಕಟ
Prasthutha: January 8, 2022

ಹೊಸದಿಲ್ಲಿ: ಮುಂಬರುವ ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಆಯೋಗ ಇಂದು (ಶನಿವಾರ) ಪ್ರಕಟಿಸಲಿದೆ.
ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಇಂದು ಭಾರತೀಯ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಲಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಪಂಜಾಬ್ ಹೊರತುಪಡಿಸಿ ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.
ಪಂಚ ರಾಜ್ಯಗಳಲ್ಲಿ ನಡೆಯುವ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ತಮ್ಮನ್ನು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
