ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ

Prasthutha|

ಕೊಲಂಬೊ: ಶುಕ್ರವಾರದಿಂದ ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಜಾರಿಗೆ ತರಲಾಗಿದೆ. ಇದರಿಂದಾಗಿ ಭದ್ರತಾ ಪಡೆಗಳಿಗೆ ದೊಡ್ಡಮಟ್ಟದ ಅಧಿಕಾರ ಲಭ್ಯವಾಗಿದ್ದು, ಪ್ರತಿಭಟನೆಗಳನ್ನು ಮುಂದಿನ ದಿನಗಳಲ್ಲಿ ಹತ್ತಿಕ್ಕಲು ಅಗತ್ಯ ಕ್ರಮ ತೆಗೆದುಕೊಳ್ಳಲಿವೆ.

- Advertisement -

ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟ ಅನುಭವಿಸುತ್ತಿರುವ ನೂರಾರು ಜನರು ಶುಕ್ರವಾರ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಕೆಲವರು ಅಧ್ಯಕ್ಷರ ಮನೆಗೂ ನುಗ್ಗಲು ಯತ್ನಿಸಿದ್ದರು. ಪರಿಸ್ಥಿತಿ ಕೈಮೀರುವುದನ್ನು ಗಮನಿಸಿದ ಅಧ್ಯಕ್ಷ ಗೊಟಬಾಯ ರಾಜಪಕ್ಸ ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ತುರ್ತು ಪರಿಸ್ಥಿತಿ ವಿಧಿಸಲಾಗಿದೆ. ಅಗತ್ಯವಸ್ತುಗಳ ಪೂರೈಕೆ ಸರಪಳಿಯನ್ನು ಕಾಪಾಡಿಕೊಳ್ಳಲು, ಜನರ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು ಭದ್ರತಾ ಪಡೆಗಳು ಅಗತ್ಯ ಕ್ರಮ ತೆಗೆದುಕೊಳ್ಳಲಿವೆ ಎಂದು ಅಧ್ಯಕ್ಷ ಗೊಟಬಾಯ ರಾಜಪಕ್ಸ ಹೇಳಿದರು.

Join Whatsapp