ಅಬಕಾರಿ ನೀತಿ ಹಗರಣದಲ್ಲಿ ಆಮ್‌ ಆದ್ಮಿ ಪಕ್ಷವನ್ನೇ ಆರೋಪಿಯಾಗಿ ಮಾಡಿದ ED

Prasthutha|

ನವದೆಹಲಿ: ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

- Advertisement -

ಜಾರಿ ನಿರ್ದೇಶನಾಲಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಇಂದು ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅಬಕಾರಿ ನೀತಿ ಹಗರಣದಲ್ಲಿ ಆಮ್‌ ಆದ್ಮಿ ಪಕ್ಷವನ್ನೇ ಆರೋಪಿಗಳು ಎಂದು ಪ್ರಸ್ತಾಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಚಾರ್ಜ್‌ಶೀಟ್‌ ಸಲ್ಲಿಸಿರುವ ಇ.ಡಿ., ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಆಪ್‌ಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ” ಎಂದು ಇ.ಡಿ. ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ‌

Join Whatsapp