ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿದ್ದಾರೆ ಎಂದ ಸಚಿವ ನವಾಬ್ ಮಲಿಕ್: ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ

Prasthutha|

ಮುಂಬೈ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿರುವ ಸಚಿವ ನವಾಬ್ ಮಲಿಕ್, ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನನ್ನ ಬಂಧನ ಕಾನೂನುಬಾಹಿರವಾಗಿದ್ದು, ತಕ್ಷಣ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಮಾತ್ರವಲ್ಲ ರಾಜಕೀಯ ವಿರೋಧಿಗಳು ತನ್ನನ್ನು ಗುರಿಯಾಗಿಸಿ ಹೂಡಿದ ಷಡ್ಯಂತ್ರ್ಯಕ್ಕೆ ಬಲಿಯಾಗಿರುವುದಾಗಿ ನವಾಬ್ ಮಲಿಕ್ ಆರೋಪಿಸಿದ್ದಾರೆ.

- Advertisement -

ಈ ಮಧ್ಯೆ ಭೂಗತಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕದೊಂದಿಗೆ ನಡೆಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಫೆಬ್ರವರಿ 23 ರಂದು ಇಡಿ ಅಧಿಕಾರಿಗಳು ಮಲಿಕ್ ಅವರನ್ನು ಬಂಧಿಸಿದ್ದರು. ಹೆಚ್ಚಿನ ತನಿಖೆಗಾಗಿ ನವಾಬ್ ಮಲಿಕ್ ಅವರನ್ನು ಮಾರ್ಚ್ 3ರ ವರೆಗೆ ಇಡಿ ಅಧಿಕಾರಿಗಳ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಪ್ರಕರಣದ ವಿಚಾರಣೆಯನ್ನು ಇಂದು ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ, ಜಿಎ ಸನಪ್ ಅವರನ್ನೊಳಗೊಂಡ ಪೀಠ ನಡೆಸಲಿದೆ ಎಂದು ಹೇಳಲಾಗಿದೆ.

Join Whatsapp