ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ
Prasthutha: January 19, 2022

ನವದೆಹಲಿ: ಜಾರಿ ನಿರ್ದೇಶನಾಲಯದ(Enforcement Directorate) ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಂಗಳವಾರ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಕರ ಮನೆಯಲ್ಲಿ ನಡೆದ ದಾಳಿಯ ನಡೆದ ಬೆನ್ನಲ್ಲೆ, ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಡಿ ದಾಳಿ ನಡೆಸುವುದು ಬಿಜೆಪಿಯ ಅಚ್ಚುಮೆಚ್ಚಿನ ಅಸ್ತ್ರವಾಗಿದೆ. ಏಕೆಂದರೆ ಅವರಲ್ಲಿಯೇ ಮರೆಮಾಚಲು ವಿಷಯಗಳಿವೆ. ಅಂತಹ ದಾಳಿಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ರಾಹುಲ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚೆನ್ನಿ ಅವರ ಸಂಬಂಧಿಕರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಮೊಹಾಲಿ ಸೇರಿದಂತೆ ಪಂಜಾಬ್‍ನಲ್ಲಿ 10 ರಿಂದ 12 ಕಡೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ನಡೆಸಿರುವ ಈ ದಾಳಿ ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ.
