ಬೆಂಗಳೂರು: ಅಕ್ರಮ ಹಣಕಾಸು ವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರಿನ ಇಡಿ ಕಚೇರಿಯಲ್ಲಿ ವಿಚಾರಣೆ ನಂತರ ಸುಶೀಲ್ ಬಂಧನ ನಡೆದಿದೆ.ಸುಶೀಲ್ ಪಾಂಡುರಂಗ ವಿರುದ್ಧ ವೈಯಕ್ತಿಕ ಹಾಗೂ ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮವೆಸಗಿರುವ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂತ್ರಿ ಗ್ರೂಪ್ ಮೇಲೆ ಇ.ಡಿ. ದಾಳಿ ಮಾಡಿತ್ತು.
ದಾಳಿ ವೇಳೆ ಕೆಲವು ದಾಖಲೆ ಪತ್ರಗಳನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಸುಶೀಲ್ ಗೆ ಶುಕ್ರವಾರ ನೋಟಿಸ್ ನೀಡಿದ್ದರು ಮತ್ತು ಇಂದಿನ ವಿಚಾರಣೆ ಬಳಿಕ ಮಂತ್ರಿ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ ಅವರನ್ನು ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.