20ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.