ನವದೆಹಲಿ : ಇಡಿ ಮತ್ತು ಸಿಬಿಐ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಸುಗ್ರೀವಾಜ್ಞೆ ಸಂವಿಧಾನ ವಿರೋಧಿಯಾಗಿದೆ ಎಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಸುಗ್ರೀವಾಜ್ಞೆ ಮತ್ತು ಇ.ಡಿ, ಸಿಬಿಐ ಮುಖ್ಯಸ್ಥರು ಮತ್ತು ರಕ್ಷಣೆ, ಗೃಹ ಹಾಗೂ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ಅವಧಿಯನ್ನೂ ವಿಸ್ತರಿಸುವ ಕುರಿತು ಸಿಬ್ಬಂದಿ ಸಚಿವಾಲಯ ನ.15ರಂದು ಹೊರಡಿಸಿದ್ದ ಅಧಿಸೂಚನೆ ವಿರುದ್ಧವೂ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.