ಚೋಧಪುರ: ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಹೋಗುವ ಮೊದಲು ಅಲ್ಲಿಗೆ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆಯ ಅಧಿಕಾರಿಗಳನ್ನು ಮೊದಲು ಕಳುಹಿಸಿಕೊಡುತ್ತಾರೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮೋದಿಯ ಜವಾನರೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಾತವಾಗಿ ಪ್ರಶ್ನಿಸಿದ್ದಾರೆ.
ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ರಾಜಸ್ಥಾನದ ಜೋಧಪುರದಲ್ಲಿ ಮಾತನಾಡಿದ ಖರ್ಗೆ, ಚುನಾವಣೆಯ ಸಂದರ್ಭಗಳಲ್ಲೆಲ್ಲಾ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದೇಶದ ವಿವಿಧ ಭಾಗಗಳಲ್ಲಿ ದಾಳಿಗಳು ನಡೆಸಲಾಗುತ್ತಿದೆ ಎಂದು ಗುಡುಗಿದ್ದಾರೆ.
ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ಪ್ರಧಾನಿ ಮೋದಿ ಅವರಿಗೆ ಬಡವರು ನೆನಪಾಗುತ್ತಾರೆ. ಉಳಿದ ಸಮಯದಲ್ಲಿ ಅವರು ಉದ್ಯಮಿ ಆದಾನಿ ಬಗ್ಗೆಯೇ ಚಿಂತಿಸುತ್ತಾರೆ ಖರ್ಗೆ ವಾಗ್ದಾಳಿ ನಡೆಸಿದರು.
ನರೇಂದ್ರ ಮೋದಿಯವರ ಅಧಿಕಾರಾವವಧಿಯಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.
ರಾಜಸ್ಥಾನ ವಿಧಾನಸಭೆ ಚುನಾವಣೆ ನ.25ರಂದು ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.