ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ಚಾರ್ಜ್​ಶೀಟ್: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

- Advertisement -

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್​ ಶೀಟ್ ಸಲ್ಲಿಸಿದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಬರ್ ರಸ್ತೆಯ 24ನೇ ಸಂಖ್ಯೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ 9 ರಂದು ಆರೋಪಪಟ್ಟಿ ಸಲ್ಲಿಸಿರುವುದಾಗಿ ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿತ್ತು. ಸೋನಿಯಾ ಮತ್ತು ರಾಹುಲ್ ಗಾಂಧಿ ಜೊತೆಗೆ, ಆರೋಪಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನೂ ಸಹ ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ, ಕೇಂದ್ರದ ಈ ಕ್ರಮವನ್ನು ಟೀಕಿಸಿದ್ದಾರೆ. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸನ್ನು ಗುರಿಯಾಗಿಸುವ ಪ್ರಯತ್ನ ಎಂದು ಹೇಳಿದ್ದಾರೆ.

- Advertisement -

ಇ.ಡಿಯ ಈ ಕ್ರಮಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಆರೋಪಪಟ್ಟಿ ‘ಪ್ರತೀಕಾರದ ರಾಜಕೀಯ‘ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -


Must Read

Related Articles