Home ಟಾಪ್ ಸುದ್ದಿಗಳು ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ

ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ

ನವದೆಹಲಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಅನಾರೋಗ್ಯದ ಬಗ್ಗೆ ಸೋನಿಯಾ ಗಾಂಧಿ ಇಡಿಗೆ ವಿಚಾರಣೆಯನ್ನು ಮುಂದೂಡುವಂತೆ ಪತ್ರ ಬರೆದಿದ್ದರು. ಅವರ ಮನವಿಗೆ ತನಿಖಾ ಸಂಸ್ಥೆ ಒಪ್ಪಿಗೆ ಸೂಚಿಸಿದೆ.

ಜೂನ್ 12 ರಂದು ಸೋನಿಯಾ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಕೆಲ ದಿನಗಳ ನಂತರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಶಿಲೀಂದ್ರ ಸೋಂಕು ತಗುಲಿದ್ದು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಸದ್ಯ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು,  ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Join Whatsapp
Exit mobile version