ಮುಂಬೈ : ಕುಖ್ಯಾತ ಭೂಗತ ದೊರೆ ದಾವೂದ್ ಇಬ್ರಾಹಿಂ ನ ಸಹೋದರಿ ಹಸೀನಾ ಪಾರ್ಕರ್ ನಿವಾಸ ಸೇರಿ ಮುಂಬೈನಲ್ಲಿ ಹಲವೆಡೆ ಏಕಕಾಲಕ್ಕೆ ಇಂದು ಬೆಳ್ಳಂ ಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಹಲವು ಸ್ಥಳಗಳಲ್ಲಿ ಮಹತ್ವದ ದಾಖಲೆಗಳಿಗಾಗಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಹವಾಲಾ ನೆಟ್‌ವರ್ಕ್ ಮತ್ತು ನಾರ್ಕೋ-ಭಯೋತ್ಪಾದನೆ ಕುರಿತ ತನಿಖೆ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರದ ರಾಜಧಾನಿಯಲ್ಲಿ ಸುಮಾರು ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ದಾವೂದ್‌ನ ಭದ್ರಕೋಟೆ ನಾಗ್ಪಾಡ ಪ್ರದೇಶದ ಮೇಲೂ ಇಡಿ ದಾಳಿ ಆಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಇತ್ತೀಚೆಗೆ ಸಲ್ಲಿಸಿದ ವರದಿ ಮತ್ತು ಗುಪ್ತಚರ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.