ಬಿಹಾರ ಡಿಸಿಎಂ ತೇಜಸ್ವಿ ಯಾದವ್’ರ ದೆಹಲಿಯ ಮನೆ ಮೇಲೆ ED ದಾಳಿ

Prasthutha|

ನವದೆಹಲಿ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದೆಹಲಿಯ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

- Advertisement -

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಭೂಮಿ’ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ ಹಾಗೂ ಆರ್‌’ಜೆಡಿ ಪಕ್ಷದ ನಾಯಕ ಲಾಲೂ ಪ್ರಸಾದ್  ಅವರನ್ನು ಕೂಡ ಈಗಾಗಲೇ ವಿಚಾರಣೆ ನಡೆಸಲಾಗಿತ್ತು.

- Advertisement -

ಭೂಮಿಯನ್ನು ಕೊಡುಗೆಯಾಗಿ ನೀಡುವಿಕೆ ಅಥವಾ ಕಡಿಮೆ ದರದಲ್ಲಿ ಭೂ ಮಾರಾಟ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೀಡಿದ ಆರೋಪದಲ್ಲಿ ಲಾಲೂ ಪ್ರಸಾದ್ ಕುಟುಂಬ ಮತ್ತು ಇತರ 14 ಮಂದಿಯನ್ನು ವಿಚಾರಣೆ ನಡೆಸಲಾಗುತ್ತದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

 ‘ನಮ್ಮ ಕುಟುಂಬವು ಬಿಜೆಪಿಯನ್ನು ತೀವ್ರ ವಿರೋಧಿಸುತ್ತಿರುವ ಕಾರಣ ಸಿಬಿಐ ಕ್ರಮಕ್ಕೆ ಮುಂದಾಗಿದೆ‘ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.



Join Whatsapp