ನವದೆಹಲಿ: ಮೈತ್ರಿಕೂಟದ ನಾಯಕತ್ವ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲು ಫೆ.24ರಿಂದ ಛತ್ತೀಸ್’ಗಡದ ರಾಜಧಾನಿ ರಾಯಪುರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಮೂರು ದಿನಗಳ ಕಾಂಗ್ರೆಸ್ ಮಹಾಧಿವೇಶನದ ಹೊಸ್ತಿಲಲ್ಲೇ ಜಾರಿ ನಿರ್ದೇಶನಾಲಯ ಸೋಮವಾರ ಛತ್ತೀಸ್’ಗಡದ ಕಾಂಗ್ರೆಸ್’ನ ಹಿರಿಯ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.
ಕಲ್ಲಿದ್ದಲು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಭಿಲಾಯ್ (ದುರ್ಗ್ ಜಿಲ್ಲೆ) ಶಾಸಕ ದೇವೇಂದ್ರ ಯಾದವ್, ಛತ್ತೀಸ್’ಗಢ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿ ರಾಮ್’ಗೋಪಾಲ್ ಅಗರ್ವಾಲ್, ಛತ್ತೀಸ್’ಗಢ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧ್ಯಕ್ಷ ಸುಶೀಲ್ ಸನ್ನಿ ಅಗರ್ವಾಲ್ ಮತ್ತು ಪಕ್ಷದ ರಾಜ್ಯ ವಕ್ತಾರ ಆರ್.ಪಿ.ಸಿಂಗ್ ಸೇರಿದಂತೆ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಮುಂಜಾನೆಯಿಂದ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.