ಹೊಸದಿಲ್ಲಿ: ನಿವೃತ್ತ ಐಎಎಸ್ ಅಧಿಕಾರಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್ ಅವರ ಮನೆ ಮತ್ತು ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ(ಈಡಿ) ದಾಳಿ ನಡೆಸಿದೆ.
ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ದಕ್ಷಿಣ ದೆಹಲಿಯ ವಸಂತ್ ಕುಂಜ್, ಅಡ್ಚಿನಿ, ಮೆಹ್ರೋಲಿ ಪ್ರದೇಶಗಳಲ್ಲಿನ ನಿವಾಸಗಳು ಮತ್ತು ಎರಡು ಎನ್‌ಜಿಒಗಳ ಮೇಲೆ ಈಡಿ ದಾಳಿ ನಡೆಸಿದ ಈಡಿ ಹಣಕಾಸು ಮತ್ತು ಬ್ಯಾಂಕಿಂಗ್ ದಾಖಲೆಗಳನ್ನು ಸಂಗ್ರಹಿಸಿದೆ.
ಲೇಖಕರಾದ ಮಂದರ್, ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಕುರಿತು ಹಲವಾರು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿದ್ದಾರೆ. ಕಳೆದ ಫೆಬ್ರವರಿಯಲ್ಲಿ ದೆಹಲಿ ಪೊಲೀಸರು ಸಲ್ಲಿಸಿದ ಎಫ್‌ಐಆರ್ ಅನ್ನು ಆಧರಿಸಿ ಈಡಿ ದಾಳಿ ನಡೆಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎನ್‌ಸಿಪಿಸಿಆರ್ ತಂಡವು ಮಂದರ್ ಅವರ ಎರಡು ಎನ್‌ಜಿಒಗಳನ್ನು ಪರಿಶೀಲನೆ ನಡೆಸಿತ್ತು.