ಸಚಿವ ಸುಧಾಕರ್ ಆಪ್ತ ಮನೆ ಮೇಲೆ ಇ.ಡಿ ದಾಳಿ

Prasthutha|

ಚಿಕ್ಕಬಳ್ಳಾಪುರ: ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ನಿರ್ದೇಶಕ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಆಪ್ತ ಅಶ್ವತ್ಥನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಕೋಚಿಮುಲ್ ಇತ್ತೀಚೆಗೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು.


ಚಿಂತಾಮಣಿ ತಾಲ್ಲೂಕಿನಿಂದ ಅಶ್ವತ್ಥನಾರಾಯಣ ಬಾಬು ಕೋಚಿಮುಲ್ ನಿರ್ದೇಶಕರಾಗಿದ್ದಾರೆ.



Join Whatsapp