Home ಟಾಪ್ ಸುದ್ದಿಗಳು ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ: ರಾಹುಲ್ ಗಾಂಧಿ

ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ: ರಾಹುಲ್ ಗಾಂಧಿ

►ʼಚಹಾ ಮತ್ತು ಬಿಸ್ಕತ್ ನೊಂದಿಗೆ ತನಿಖಾಧಿಕಾರಿಗಳನ್ನು ಎದುರು ನೋಡುತ್ತಿದ್ದೇನೆ’


ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ನಾನು ಇಡಿ ಅಧಿಕಾರಿಗಳನ್ನು ಕೈಬೀಸಿ ಸ್ವಾಗತಿಸಲು ಸಿದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.


“ಸ್ಪಷ್ಟವಾಗಿ ಹೇಳುತ್ತೇನೆ, ಇಬ್ಬರಲ್ಲಿ ಒಬ್ಬರಿಗೆ ನನ್ನ ಚಕ್ರವ್ಯೂಹದ ಭಾಷಣ ಇಷ್ಟವಾಗಿಲ್ಲ. ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗುತ್ತಿದೆ ಎಂದು ಇಡಿ ‘ಒಳಗಿನವರೇ’ ನನಗೆ ಹೇಳಿದ್ದಾರೆ” “ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಇಡಿಯನ್ನು ಸ್ವಾಗತಿಸಲು ಕಾಯುತ್ತಿದ್ದೇನೆ” ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ತಿಳಿಸಿದ್ದಾರೆ.


ಸೋಮವಾರ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ‘ಚಕ್ರವ್ಯೂಹ’ ನಿರ್ಮಿಸಿದ ಹಾಗೆ ಬಿಜೆಪಿಯು ದೇಶದಲ್ಲಿ ರೈತರು ಮತ್ತು ಯುವಕರ ಸುತ್ತ ‘ಚಕ್ರವ್ಯೂಹ’ ನಿರ್ಮಿಸುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಟೀಕಿಸಿದ್ದರು.

Join Whatsapp
Exit mobile version