ಚಂಡೀಗಢ: ತಮ್ಮ ಸಂಬಂಧಿ ಭೂಪಿಂದರ್ ಸಿಂಗ್ ಹನಿ ಅವರ ಮನೆ ಮೇಲೆ ಇ.ಡಿ. ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನ, ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ನನ್ನನ್ನು ಗುರಿಯಾಗಿಸಿಕೊಂಡು ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ನಾವು ಇದರ ವಿರುದ್ಧ ಹೋರಾಡಲು ಸಿದ್ಧರಿದ್ದೇವೆ. ಈ ಹಿಂದೆ ಪಶ್ಚಿಮ ಬಂಗಾಳದ ಚುನಾವಣೆಯ ಸಂದರ್ಭದಲ್ಲಿಯೂ ಇಂತಹದೇ ವಿಷಯ ಸಂಭವಿಸಿತ್ತು” ಎಂದು ಚನ್ನಿ ಹೇಳಿದ್ದಾರೆ.
ನಿನ್ನೆ , ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪಂಜಾಬಿನ ಸುಮಾರು ಹನ್ನೆರಡು ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿತ್ತು.
ಮರಳು ಮಾಫಿಯಾಗೆ ಸಂಬಂಧಪಟ್ಟಂತೆ ಭೂಪಿಂದರ್ ಸಿಂಗ್ ಹನಿಗೆ ಸಂಬಂಧಿಸಿದ ನಿವೇಶನಗಳನ್ನು ಒಳಗೊಂಡಂತೆ ಶಂಕಿತರ ನಿವಾಸ ಮತ್ತು ಕಚೇರಿ ಆವರಣಗಳನ್ನು ಫೆಡರಲ್ ಸಂಸ್ಥೆ ಶೋಧಿಸಿದೆ.
ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ: ಇ.ಡಿ.ದಾಳಿ ವಿರುದ್ಧ ಪಂಜಾಬ್ ಸಿಎಂ ಚನ್ನಿ ಕಿಡಿ
Prasthutha|