ಲೂಧಿಯಾನ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ಅವರ ಸಂಬಂಧಿಗಳ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಕೋಟ್ಯಂತರ ರೂಪಾಯಿ ನಗದು ವಶಕ್ಕೆ ಪಡೆದಿದೆ.
ಮೂಲಗಳ ಪ್ರಕಾರ ಲೂದಿಯಾನದಲ್ಲಿರುವ ಚನ್ನಿ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, 6 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ. 2018ರಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿತ್ತು. ಈಗ ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದರೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ಅವರನ್ನು ಗುರಿಯಾಗಿಸಿಕೊಂಡು ಈ ರೀತಿಯಾಗಿ ಒತ್ತಡ ಹೇರಲು ಯತ್ನಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.