ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಭಾವನ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು,6.45 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕೇಂದ್ರ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.
ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತದೆ ಎಂಬುದಕ್ಕೆ ಇದೊಂದು ಪುರಾವೆಯಾಗಿದೆ ಎಂದು ಪಕ್ಷದ ನಾಯಕ ಸಂಜಯ ರಾವತ್ ಹಾಗೂ ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಈ ಕಾರ್ಯಾಚರಣೆಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಆದಾಯ ತೆರಿಗೆ ಇಲಾಖೆ ಪ್ರವಾಸೋದ್ಯಮ ಸಚಿವ ಅದಿತ್ಯ ಠಾಕ್ರೆ ನಿಕಟವರ್ತಿಗಳ ನಿವಾಸದ ಮೇಲೂ ದಾಳಿ ನಡೆಸಿತ್ತು.