ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಇಡಿ ದಾಳಿ

Prasthutha|

ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಜಾರಿ ನಿರ್ದೇಶಕನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ಕೋಲ್ಕತ್ತಾದ ಸಾಲ್ಟ್ ಲೇಕ್‌ ನಲ್ಲಿರುವ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ.

ಪಡಿತರ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇಡಿ ಅಧಿಕಾರಿಗಳು ಗುರುವಾರ ಬೆಳಗ್ಗೆ ಬಂಗಾಳ ಅರಣ್ಯ ಸಚಿವರ ನಿವಾಸಕ್ಕೆ ತಲುಪಿದ್ದಾರೆ. ಜ್ಯೋತಿಪ್ರಿಯಾ ಮಲಿಕ್ ಅವರು ಅರಣ್ಯ ಸಚಿವರಾಗುವ ಮೊದಲು ಆಹಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.