Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಗೆ ಇಡಿ ಸಮನ್ಸ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.

ಅಲ್ಲದೆ, ಡಿಸೆಂಬರ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಅವರ ಹೆಸರು ಕೇಳಿಬಂದಿದ್ದು, ಈ ಪ್ರಕರಣದ ಪ್ರಮುಖ ರೂವಾರಿ ಸುಕೇಶ್‌ ಚಂದ್ರಶೇಖರ್‌ ಜೊತೆಗೆ ಜಾಕ್ವೆಲಿನ್ ಹೆಸರು ತಳುಕು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಮ್ಮೆ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್‌ ಗೆ ನೋಟಿಸ್‌ ಕೂಡ ನೀಡಿತ್ತು. ಅಲ್ಲದೆ ನಿನ್ನೆ ಭಾರತ ಬಿಟ್ಟು ಹೊಗದಂತೆ ಬಾಲಿವುಡ್ ನಟಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದ ಇಡಿ, ಇಂದು ಸಮನ್ಸ್ ಜಾರಿ ಮಾಡಿದೆ.

Join Whatsapp
Exit mobile version