ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್ ನೀಡಿದೆ.
7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂದ ಕೇಜ್ರಿವಾಲ್ ಅವರ ವಾದವನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯವು 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.