Home ಟಾಪ್ ಸುದ್ದಿಗಳು ಡಿ ಕೆ ಸಹೋದರರಿಗೆ ಇ ಡಿ ಮತ್ತೆ ಸಮನ್ಸ್

ಡಿ ಕೆ ಸಹೋದರರಿಗೆ ಇ ಡಿ ಮತ್ತೆ ಸಮನ್ಸ್

ಬೆಂಗಳೂರು: ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಈ ಮೊದಲು ದಿನಾಂಕ 23-09-2022 ರಂದು ಇವರಿಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.

ಆದರೆ ಅದಕ್ಕೆ ನಿರಾಕರಿಸಿರುವ ಇ ಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ 05-10-2022 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ.

ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version