Home ಟಾಪ್ ಸುದ್ದಿಗಳು ಜಮ್ಮ ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗೆ ED ಸಮನ್ಸ್ !

ಜಮ್ಮ ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗೆ ED ಸಮನ್ಸ್ !

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 15 ರಂದು ವಿಚಾರಣೆಗೆ ಹಾಜರಾಗುವಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಯವರಿಗೆ ಎನ್ಫೋರ್ಸ್’ಮೆಂಟ್ ಡೈರಕ್ಟರೇಟ್ (ED) ಆದೇಶ ಹೊರಡಿಸಿದೆ.

ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ನಂತರ ಕಳೆದ ವರ್ಷ ಬಿಡುಗಡೆಯಾದ 60 ವರ್ಷದ ಪಿಡಿಪಿ ನಾಯಕಿಗೆ ರಾಷ್ಟ್ರ ರಾಜಧಾನಿಯ ಇಡಿ ಕೇಂದ್ರ ಕಚೇರಿಯಲ್ಲಿ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version