ನವೆಂಬರ್ 3ರಂದು ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಗೆ ಇ.ಡಿ ಸಮನ್ಸ್

Prasthutha|

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯಲ್ಲಿ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

ಗುರುವಾರ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಸೂಚಿಸಲಾಗಿದೆ. ಅವರ ಸಹಾಯಕ ಪಂಕಜ್ ಮಿಶ್ರಾ ವಿರುದ್ಧದ ನಮ್ಮ ತನಿಖೆಯ ಸಮಯದಲ್ಲಿ ಕೆಲವು ಸಂಗತಿಗಳನ್ನು ಬಹಿರಂಗಪಡಿಸಲಾಗಿದ್ದು, ಅವುಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಇ.ಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರ್ಷದ ಜುಲೈನಲ್ಲಿ ಬಾರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಸೊರೇನ್ ಅವರ ನಿಕಟವರ್ತಿ ಮತ್ತು ಅವರ ಶಾಸಕ ಪ್ರತಿನಿಧಿ ಪಂಕಜ್ ಮಿಶ್ರಾ ಅವರನ್ನು ಬಂಧಿಸಿ, ಅವರ ಮನೆಯಿಂದ ಎರಡು ಸಹಿ ಮಾಡಿದ ಚೆಕ್ ಗಳು ಸೇರಿದಂತೆ ಪಾಸ್ಬುಕ್ ಮತ್ತು ಚೆಕ್ಬುಕ್ ಅನ್ನು ವಶಪಡಿಸಿಕೊಂಡ ಸುಮಾರು ಒಂದು ತಿಂಗಳ ನಂತರ ಇಡಿ ಈ ಕ್ರಮ ಕೈಗೊಂಡಿದೆ.

Join Whatsapp