ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೊಮ್ಮೆ ಇಡಿ ಸಮನ್ಸ್

Prasthutha|

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದಾರೆ.

- Advertisement -


ವಿಧಾನಸಭಾ ಅಧಿವೇಶನ ಮತ್ತು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲೇ ಇಡಿ ನೋಟಿಸ್ ಬಂದಿರುವುದಕ್ಕೆ ಡಿಕೆಶಿ ಕಿಡಿ ಕಾರಿದ್ದಾರೆ.


ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

- Advertisement -

ಸೆಪ್ಟಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ ಎಂದು ತಿಳಿದುಬಂದಿದೆ.
2017ರಲ್ಲಿ ಶಿವಕುಮಾರ್ ಅವರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಅವರ ದೆಹಲಿಯ ನಿವಾಸದಿಂದ 8.59 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದರು. ಬಳಿಕ ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಅದಾದ ಬಳಿಕ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.



Join Whatsapp