ಮೂರನೇ ಸುತ್ತಿನ ವಿಚಾರಣೆಗೆ ನಾಳೆ ಮತ್ತೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್

Prasthutha|

- Advertisement -

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ನೀಡಿದೆ.

ಸೋನಿಯಾ ಗಾಂಧಿಯವರು ಎರಡನೇ ಸುತ್ತಿನ ವಿಚಾರಣೆಗಾಗಿ ಇಂದು ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಇದ್ದರು.

- Advertisement -

ಜುಲೈ 21ರಂದು ಅವರನ್ನು ಮೊದಲ ಬಾರಿಗೆ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಹಣಕಾಸು ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

Join Whatsapp