ನ್ಯಾಷನಲ್ ಹೆರಾಲ್ಡ್ ಕೇಸ್: ED ಯಿಂದ ಇಂದು ಮತ್ತೆ ರಾಗಾ ವಿಚಾರಣೆ

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಬಾರಿ ವಿಚಾರಣೆ ಎದುರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮತ್ತೆ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

- Advertisement -


ಜೂನ್ 13ರಿಂದ 15ರ ವರೆಗೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಅವರಿಗೆ ಮತ್ತೊಂದು ಸಮನ್ಸ್ ನೀಡಿದ್ದ ಜಾರಿ ನಿರ್ದೇಶನಾಲಯ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ನೀಡಿ ಶುಕ್ರವಾರದ ಬದಲಿಗೆ ಬೇರೆ ದಿನಾಂಕ ನೀಡುವಂತೆ ರಾಹುಲ್ ಮನವಿ ಮಾಡಿದ್ದರು. ಇದರಂತೆ ಸೋಮವಾರಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ.



Join Whatsapp