Home ಟಾಪ್ ಸುದ್ದಿಗಳು ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಮುಡಾ’ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ನೀಡಿದ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ಹೊರಡಿಸಿದ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ.

ಬಿಜೆಪಿ ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿ. ಮೂಲಕ ಬಿಡುಗಡೆ ಮಾಡಿಸಿದೆ ಎಂದರು.
ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

Join Whatsapp
Exit mobile version