Home ಟಾಪ್ ಸುದ್ದಿಗಳು ವಿದ್ಯಾವಂತರೇ ಕೋಮುವಾದಿ, ಭ್ರಷ್ಟಾಚಾರಿಯಾಗಿ ಬದಲಾಗುತ್ತಿದ್ದಾರೆ: ಯು.ಟಿ.ಖಾದರ್

ವಿದ್ಯಾವಂತರೇ ಕೋಮುವಾದಿ, ಭ್ರಷ್ಟಾಚಾರಿಯಾಗಿ ಬದಲಾಗುತ್ತಿದ್ದಾರೆ: ಯು.ಟಿ.ಖಾದರ್

ತುಮಕೂರು: ವಿದ್ಯಾವಂತರೇ ವಿವಿಧ ಸಮಸ್ಯೆ ಸೃಷ್ಟಿ ಮಾಡುತ್ತಿದ್ದು, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ರೂಪಿಸುವ ಕೆಲಸವೂ ಆಗಬೇಕಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.


ಸ್ಟೂಡೆಂಟ್ ಇಸ್ಲಾಮಿಕ್ ಆರ್ಗೈನೇಜೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 18ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡಿದರು.


ಇಡೀ ವಿಶ್ವದಲ್ಲಿಯೇ ಭಾರತದ ಸಂವಿಧಾನಕ್ಕೆ ಮಹತ್ವವಿದೆ. ಬಡವ, ಬಲ್ಲಿದ ಎಲ್ಲರೂ ಸಹ ಇದರ ಅಡಿಯಲ್ಲಿ ರಕ್ಷಣೆ ಪಡೆಯಬಹುದು.


ಯಾವುದೇ ವ್ಯಕ್ತಿ ಮಾತನಾಡುವ ಮಾತು ಮತ್ತು ಮಾಡುವ ಕೆಲಸ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದರೆ ಆತ ದೇಶಪ್ರೇಮಿ. ದೇಶ ಅಭಿವೃದ್ಧಿಗೆ ಮಾರಕವಾಗಿದ್ದರೆ ಆತನೇ ದೇಶದ್ರೋಹಿ. ಹೆಚ್ಚು ವಿದ್ಯಾವಂತರೇ ಕೋಮವಾದಿ, ಭ್ರಷ್ಟಾಚಾರಿ, ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಹಾಗಾಗಿ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು ಸೇರಿದಂತೆ ಸಂಪೂರ್ಣ ಸಮಾಜಮುಖಿ ವ್ಯಕ್ತಿಗಳನ್ನಾಗಿ ರೂಪಿಸುವ ಅಗತ್ಯವಿದೆ ಎಂದರು.


ಪ್ರಪಂಚದಲ್ಲಿ ಡಾಕ್ಟರ್, ಎಂಜಿನಿಯರ್, ವಿಜ್ಞಾನಿ, ವಕೀಲರಾಗಲು ಕಾಲೇಜುಗಳಿವೆ. ಆದರೆ ಮಾನವೀಯತೆ, ಸಹೋದರತೆ, ಪರಸ್ಪರ ಪ್ರೀತಿಯಿಂದ ಸತ್ಪ್ರಜೆಯಾಗಿ ಬದುಕುವುದನ್ನು ಕಲಿಸುವ ಯಾವ ಕಾಲೇಜುಗಳೂ ಇಲ್ಲ ಎಂದರು.

Join Whatsapp
Exit mobile version