ಬೆಂಗಳೂರು: ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಹೆಚ್ಚಳ ಆತಂಕ ತಂದಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಕೋವಿಡ್ 19 ಒಮಿಕ್ರಾನ್ ರೂಪದಲ್ಲಿ ಕಾಣಿಸಿಕೊಂಡಿದ್ದು, ಈ ಮಧ್ಯೆ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.