Home ಜಾಲತಾಣದಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ನೀಡುವ ಮೂಲಕ ಶಾಲೆ ಆರಂಭೋತ್ಸವಕ್ಕೆ ಶಿಕ್ಷಣ ಸಚಿವ ಚಾಲನೆ

ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ನೀಡುವ ಮೂಲಕ ಶಾಲೆ ಆರಂಭೋತ್ಸವಕ್ಕೆ ಶಿಕ್ಷಣ ಸಚಿವ ಚಾಲನೆ

ದೇವನಹಳ್ಳಿ: 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭವನ್ನು ಗುರುತಿಸುವ ಮೂಲಕ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದು ಪುನರಾರಂಭಗೊಂಡಿವೆ.

ಸರ್ಕಾರಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಪುನರಾರಂಭ ಸಮಾರಂಭ ನಡೆಯಿತು. ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಿಹಿ ಹಂಚುವ ಮೂಲಕ ಈ ಸಂದರ್ಭವನ್ನು ಆಚರಿಸಿದ್ದಾರೆ.

ಪ್ರಾಥಮಿಕ ಶಾಲೆಗಳಿಂದ ಹಿಡಿದು ಪ್ರೌಢಶಾಲೆಗಳವರೆಗೆ ವಿದ್ಯಾರ್ಥಿಗಳು ವಿರಾಮದ ನಂತರ ತಮ್ಮ ತರಗತಿಗಳಿಗೆ ಹಿಂತಿರುಗಿದ್ದಾರೆ. ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭದ ಅಂಗವಾಗಿ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಶಾಲೆಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ ಖುದ್ದು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಸಚಿವರ ಈ ನಡೆ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭವನ್ನು ಗುರುಟಿಸುವುದರ ಜೊತೆಗೆ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದ ಮಹತ್ವವನ್ನು ಸಾರಿದೆ.

ಪಠ್ಯಪುಸ್ತಕಗಳ ಜೊತೆಗೆ ಇತರ ಅಗತ್ಯ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವತ್ತಲೂ ಸರ್ಕಾರ ಗಮನಹರಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಶಿಕ್ಷಣ ಪ್ರಯಾಣಕ್ಕೆ ಅಗತ್ಯವಾದ ಪರಿಕರಗಳನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಸಮವಸ್ತ್ರ ಮತ್ತು ಬ್ಯಾಗ್‌ಗಳನ್ನು ವಿತರಿಸಲಾಯಿತು. ಸಚಿವ ಮಧು ಬಂಗಾರಪ್ಪ ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಶಾಲೆಯ ಸಮಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಡಿಸಿ ಲತಾ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp
Exit mobile version