15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಸಚಿವ ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಒಟ್ಟು 15 ಸಾವಿರ ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

ಕೆಲ ದಿನಗಳಲ್ಲೇ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುವುದು. ಶಿಕ್ಷಕರ ಕೊರತೆ ನೀಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಇನ್ನು ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Join Whatsapp