Home ಟಾಪ್ ಸುದ್ದಿಗಳು 15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಸಚಿವ ಬಿ.ಸಿ.ನಾಗೇಶ್

15 ಸಾವಿರ ಶಿಕ್ಷಕರ ಶೀಘ್ರ ನೇಮಕ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಒಟ್ಟು 15 ಸಾವಿರ ಶಿಕ್ಷಕರನ್ನು ಕೂಡಲೇ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಕೆಲ ದಿನಗಳಲ್ಲೇ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಲಾಗುವುದು. ಶಿಕ್ಷಕರ ಕೊರತೆ ನೀಗಿಸಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈಗಾಗಲೇ 23 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಇನ್ನು ಹೆಚ್ಚುವರಿಯಾಗಿ 4 ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Join Whatsapp
Exit mobile version