Home ಟಾಪ್ ಸುದ್ದಿಗಳು ಹೆಣ್ಣು ಮಕ್ಕಳ ಶಿಕ್ಷಣ, ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ: ಪ್ರಧಾನಿ ಮೋದಿ

ಹೆಣ್ಣು ಮಕ್ಕಳ ಶಿಕ್ಷಣ, ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ: ಪ್ರಧಾನಿ ಮೋದಿ

ನವದೆಹಲಿ: ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.

‘ಮನ್ ಕಿ ಬಾತ್’ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರಲ್ಲಿ ಅನಕ್ಷರತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದರು. ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗದ ಹೆಣ್ಣು ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ನಾವು ‘ಕನ್ಯಾ ಶಿಕ್ಷಾ ಪ್ರವೇಶ ಉತ್ಸವ’ವನ್ನು ಪ್ರಾರಂಭಿಸಿದ್ದೇವೆ. ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಹೇಳಿದರು.

Join Whatsapp
Exit mobile version