ಬೆಂಗಳೂರು: ಕಾರ್ಮಿಕರ ಕಲ್ಯಾಣ ಮಂಡಳಿಯ 2022-23ನೇ ಸಾಲಿನ ಶೈಕ್ಷಣಿಕ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಿರುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಮಕ್ಕಳ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಬೇಕು ಎಂದು ತಿಳಿಸಿದೆ.
ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಆಗದ ಕಾರಣ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ, ಸದರಿ ಫಲಾನುಭವಿಗಳ ಪಟ್ಟಿಯನ್ನು ಮಂಡಳಿಯ ವೆಬ್ ಸೈಟ್ https://karbwwb.karnataka.gov. inನಲ್ಲಿ ಪ್ರಕಟಿಸಲಾಗಿದ್ದು, ಸದರಿ ಫಲಾನುಭವಿಗಳು ಅ.15ರೊಳಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡಬೇಕು.
ಸದರಿ ಫಲಾನುಭವಿಗಳು ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ತೆರಳಿ ಶೈಕ್ಷಣಿಕ ಧನಸಹಾಯ ಕೋರಲಾದ ಮಕ್ಕಳ SATS ID/STUDENT IDಅನ್ನು ಅ.15ರೊಳಗೆ ಅಪ್ಡೇಟ್ ಮಾಡುವಂತೆ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ