ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಪ್ರಯತ್ನ ಮುಂದುವರಿಯುತ್ತಿದೆ: ಟಿ.ಎಸ್ ತಿರುಮೂರ್ತಿ

Prasthutha|

ಹೊಸದಿಲ್ಲಿ: ಉಕ್ರೇನ್ ನಲ್ಲಿರುವ  ಭಾರತೀಯರಿಗೆ ಭದ್ರತಾ ವ್ಯವಸ್ಥೆಯನ್ನು ಭಾರತ ಖಚಿತಪಡಿಸಿದೆ ಎಂದು ವಿಶ್ವ ಸಂಸ್ಥೆಯ  ಭಾರತೀಯ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದರು.

- Advertisement -

ವಿದ್ಯಾರ್ಥಿಗಳನ್ನು ಮರಳಿ ಕರೆತರಲು ಬೇಕಾದ  ಕ್ರಮಗಳನ್ನು ತೀವ್ರಗೊಳಿಸಲಾಗುವುದು. ಉಕ್ರೇನ್ ಯುದ್ಧವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂಬ ನಿಲುವನ್ನು ಭಾರತ ಭದ್ರತಾ ಸಭೆಯಲ್ಲಿತೆಗೆದುಕೊಂಡಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವಂತೆ ಉಕ್ರೇನ್ ಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಈ ಮಧ್ಯೆ ಉಕ್ರೇನ್ ನಿಂದ ಹೊರಟ ಏರ್ ಇಂಡಿಯಾದ ಎರಡನೇ ವಿಮಾನ ವು ಇಂದು ಮುಂಜಾನೆ ಭಾರತಕ್ಕೆ ತಲುಪಿದೆ. ಬೋರಿಸ್ಪಿಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 242 ಜನರನ್ನು ಭಾರತಕ್ಕೆ ಕರೆತರಲಾಗಿತ್ತು. ಉಕ್ರೇನ್ ನಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದರು. ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚಾಗಿ ಉಕ್ರೇನ್ ನಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಇತರ ವಿಮಾನಗಳನ್ನು ಮಾರ್ಚ್ 25,27 ಮತ್ತು ಮಾರ್ಚ್ 6 ರಂದು ನಿಗದಿಪಡಿಸಲಾಗಿತ್ತು. ಆದರೆ ಈಗ ಉಕ್ರೇನಿನ ಎಲ್ಲ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ.

Join Whatsapp
Exit mobile version