Home ಟಾಪ್ ಸುದ್ದಿಗಳು ಸೆಪ್ಟೆಂಬರ್ ನಲ್ಲಿ ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆಗೆ ಪ್ರಯತ್ನ: ಕೆ.ಎಚ್. ಮುನಿಯಪ್ಪ

ಸೆಪ್ಟೆಂಬರ್ ನಲ್ಲಿ ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆಗೆ ಪ್ರಯತ್ನ: ಕೆ.ಎಚ್. ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.


ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಪಿಎಲ್ ಕಾರ್ಡ್ದಾರರಿಗೆ 5 ಕೆಜಿ ಹೆಚ್ಚುವರಿಗಾಗಿ ವಿತರಿಸಲು ಅಕ್ಕಿ ಸಿಗದ ಕಾರಣ ಪ್ರತಿ ಫಲಾನುಭವಿಗೆ ಐದು ಕೆಜಿ ಅಕ್ಕಿ ಬೆಲೆ 170 ರೂ. ಗಳನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದರೆ ಹೆಚ್ಚು ಸಮಯ ನಗದು ಪಾತಿಸುವುದು ಸರಿಯಲ್ಲ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಅಕ್ಕಿ ಪೂರೈಕೆಗೆ ಆಸಕ್ತಿ ವ್ಯಕ್ತಪಡಿಸಿವೆ. ಹೆಚ್ಚಿನ ದರದಲ್ಲಿ ಖರೀದಿ ಸಾಧ್ಯವಿಲ್ಲ. ಆದ್ದರಿಂದ ಭಾರತೀಯ ಆಹಾರ ನಿಗಮ (ಎಫ್ಸಿಐ) ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್ಎಸ್) ಅಡಿಯಲ್ಲಿ ನಿಗದಿಪಡಿಸುವ ದರದಲ್ಲಿ ಅಕ್ಕಿ ಪೂರೈಸಿದರೆ ಖರೀದಿಗೆ ನಾವು ಸಿದ್ಧ ಎಂದು ಎರಡೂ ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದೇವೆ’ ಎಂದರು.

Join Whatsapp
Exit mobile version