ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ; ಆಗಸ್ಟ್ 18ರಂದು ಚಾಲನೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Prasthutha|

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement -

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತ್ತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ಡಿಜಿಟಲ್ ಲೈಬ್ರರಿಯಲ್ಲಿ 40 ಲಕ್ಷದಷ್ಟು ಪುಸ್ತಕವಿದ್ದು, ಹೆಚ್ಚಿನ ಸದಸ್ಯರನ್ನು ಹೊಂದುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.5ರಂದು ಮರು ಉದ್ಘಾಟಿಸಲಾಗುವುದು ಎಂದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಸದ್ಯದಲ್ಲಿ ಹೋಬಳಿಗೊಂದು ಶಾಲೆಯನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಎರಡು ಮೂರು ಗ್ರಾಮ ಪಂಚಾಯ್ತಿಗೆ ಒಂದರಂತೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ತಿಳಿಸಿದರು.

Join Whatsapp