ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ

Prasthutha|

ಮಂಡ್ಯ : ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದುಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

- Advertisement -

ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರೆಡು ದಿನ ಮೊಟ್ಟೆ , ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

ಶಾಲಾ ಮಕ್ಕಳ‌ ಜೊತೆಗೆ ಬಿಸಿಯೂಟ ಸವಿದ ಸಚಿವರು, ಶಾಸಕರು.

- Advertisement -

ಮಂಡ್ಯದ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮದ ಬಳಿಕ ಊಟ ಮಾಡಿದ ಶಿಕ್ಷಣ ಸಚಿವರು ಹಾಗೂ ಕೃಷಿ ಸಚಿವರು ಮಕ್ಕಳಿಗೆ ಮೊಟ್ಟೆ ತಿನ್ನಿಸುವ ಮೂಲಕ ಅಧಿಕೃತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಚಿವರ ಆಗಮನ ಹಿನ್ನಲೆ ಊಟಕ್ಕೆ ಇಂದು ಹೊಳಿಗೆ ಸೇರ್ಪಡೆ ಮಾಡಲಾಗಿತ್ತು. ಮಧು ಬಂಗಾರಪ್ಪ, ಚಲುವರಾಯಸ್ವಾಮಿ ಮೊಟ್ಟೆ, ಬಿಸಿಬೇಳೆ ಬಾತು ಊಟ ಸವಿದರು. ಶಾಸಕರಾದ ಗಣಿಗ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ಮರಿತಿಬ್ಬೇಗೌಡ ಸಹ ಮಕ್ಕಳೊಂದಿಗೆ ಊಟ ಮಾಡಿದರು. ಜೊತೆಗೆ ಅಧಿಕಾರಿಗಳು ಕೂಡ ಬಿಸಿಯೂಟ ಸವಿದರು. ಮಕ್ಕಳೊಂದಿಗೆ ಓಂ ಸಹನಾ ಬವತೂ ಶ್ಲೋಕ ಹೇಳಿದ ಸಚಿವರು ಮತ್ತು ಶಾಸಕರು ನಂತರ ಮಕ್ಕಳೊಂದಿಗೆ ಬಿಸಿಯೂಟ ಸವಿದರು.

Join Whatsapp