ಅಂದು ಮೊಟ್ಟೆ ಎಸೆತ, ಇಂದು ಕೊಡಗಿನಲ್ಲಿ ಹೂಮಳೆಯ ಸ್ವಾಗತ: ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದ ಸಿದ್ದರಾಮಯ್ಯ

Prasthutha|

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಂದು ಕಾರ್ಯಕರ್ತರು ವಿರಾಜಪೇಟೆಯ ಪಂಜರಪೇಟೆಯಲ್ಲಿ ಜೆಸಿಬಿ ವಾಹನದ ಮೇಲೆ ನಿಂತು ಹೂವಿನ ದಳಗಳನ್ನು ಹಾಕಿ ಸ್ವಾಗತಿಸಿದರು.

- Advertisement -

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ ‘ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಹೇಳಿದ್ದಾರೆ.

ಕಳೆದ ವರ್ಷ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.



Join Whatsapp