ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ: ಇಂತಹ ಘಟನೆ ಸಹಿಸಕೂಡದು – ಯಡಿಯೂರಪ್ಪ

Prasthutha|

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -


ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಮತ್ಯಾರೋ ಇರಬಹುದು. ಇಂತಹ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು, ಯಾರೂ ಈ ರೀತಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.



Join Whatsapp