Home ಟಾಪ್ ಸುದ್ದಿಗಳು ಕರಾವಳಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಕರಾವಳಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಮಂಗಳೂರು: ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸಿದರು.

ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಎಲ್ಲಾ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು.

ಕರಾವಳಿಯಾದ್ಯಂತ ಇಂದು ಬಕ್ರೀದ್ ಹಬ್ಬವನ್ನು​ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಭಾರಿ ಮಳೆಯಾಗುತ್ತಿದ್ದು, ಇದನ್ನು ಲೆಕ್ಕಿಸಿದೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ವಿಶ್ವಾಸಿಗಳು ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.



Join Whatsapp
Exit mobile version