ಬೆಂಗಳೂರು, ಜು.21: ತ್ಯಾಗ ಬಲಿದಾನದ ಸಂಕೇತವಾಗಿರುವ ಈದುಲ್ ಅದ್ ಹಾ (ಬಕ್ರೀದ್) ಹಬ್ಬವನ್ನು ಮುಸ್ಲಿಮರು ದೇಶಾದ್ಯಂತ ಬುಧವಾರ ಸಂಭ್ರಮದಿಂದ ಆಚರಿಸಿದರು.
ಮುಸ್ಲಿಮರು ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಈದ್ಗಾಗಳಲ್ಲಿ ನಮಾಝ್ ಗೆ ಅವಕಾಶ ನೀಡಿರಲಿಲ್ಲ.
ಮಸೀದಿಯ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇಕಡಾ 50ರಷ್ಟು ಜನರಿಗೆ ನಮಾಝ್ ಗೆ ಅವಕಾಶ ನೀಡಲಾಗಿತ್ತು.
65 ವರ್ಷ ಪ್ರಾಯ ಮೇಲ್ಪಟ್ಟವರು ಮತ್ತು 10 ವರ್ಷ ಕಡಿಮೆ ವಯಸ್ಸಿನ ಮಕ್ಕಳಿಗೆ ಮಸೀದಿಗೆ ಪ್ರವೇಶವಿರಲಿಲ್ಲ.