ಖರ್ಗೋನ್: ಮುಂಬರುವ ಹಬ್ಬಗಳ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು, ಮೇ 2 ಮತ್ತು ಮೇ 3 ರಂದು ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
“ಈದ್ ನಮಾಝ್ ಅನ್ನು ಮನೆಯಲ್ಲಿಯೇ ನಿರ್ವಹಿಸಬೇಕು. ಅಲ್ಲದೆ, ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯಂದು ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ನೀಡುವುದಿಲ್ಲ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಖರ್ಗೋನ್) ಸುಮೇರ್ ಸಿಂಗ್ ಮುಜಾಲ್ದಾ ತಿಳಿಸಿದ್ದಾರೆ.
ಏಪ್ರಿಲ್ 10 ರಂದು ನಡೆದ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ಮೇ 1 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಕರ್ಫ್ಯೂ ಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
“ಅಗತ್ಯ ವಸ್ತುಗಳ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪಾಸ್ ನೀಡಲಾಗುವುದು ಎಂದು ಅವರು ತಿಳಿಸಿದರು.
ಈದುಲ್ ಫಿತ್ರ್ ದಿನದಂದೇ ಕರ್ಫ್ಯೂ ವಿಧಿಸಿದ ಮಧ್ಯಪ್ರದೇಶ ಸರ್ಕಾರ
Prasthutha|