Home Uncategorized ಮಹಾರಾಷ್ಟ್ರ ರಾಜಕೀಯದಲ್ಲಿ ಮಹಾ ತಿರುವು: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿ

ಮಹಾರಾಷ್ಟ್ರ ರಾಜಕೀಯದಲ್ಲಿ ಮಹಾ ತಿರುವು: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿ

►► ಸಂಜೆ 7:30ಕ್ಕೆ ಪ್ರಮಾಣವಚನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮಹಾ ತಿರುವು ಪಡೆದುಕೊಂಡಿದ್ದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಶಿವಸೇನೆಯ ಬಂಡಾಯ ಗುಂಪಿಗೆ ಬಿಜೆಪಿ ಬೆಂಬಲ ಸೂಚಿಸಿದೆ. ಸ್ವತಃ ದೇವೇಂದ್ರ ಫಡ್ನವೀಸ್ ಅವರೇ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳುವ ಮೂಲಕ ಕಳೆದ 10 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬಿಕ್ಕಟ್ಟಿಗೆ ತೆರೆ ಎಳೆದಿದ್ದಾರೆ.

Join Whatsapp
Exit mobile version