ರಸ್ತೆ ದಾಟುವಾಗ BMTC ಬಸ್ ಡಿಕ್ಕಿ; ವೃದ್ಧೆ ಮೃತ್ಯು

Prasthutha|

ಬೆಂಗಳೂರು: ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವೃದ್ದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಪದ್ಮಲತಾ(73) ಮೃತ ಅಜ್ಜಿ. ಕೆಂಗೇರಿ ಉಪನಗರದ ಬಸ್ ನಿಲ್ದಾಣ ಬಳಿ ರಸ್ತೆ ದಾಟುತಿದ್ದ ವೇಳೆ ಬಿಎಂಟಿಸಿ ಬಸ್ ವೃದ್ಧೆಯ ಎರಡೂ ಕಾಲುಗಳ ಮೇಲೆ ಹರಿದಿದೆ. ಜೂನ್ 24 ರಂದು ಸಂಜೆ 5 ಗಂಟೆಗೆ ಘಟನೆ ನಡೆದಿದ್ದು, ಅಪಘಾತ ನಡೆದ ತಕ್ಷಣ ಪೊಲೀಸರು ವೃದ್ಧೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದರು.

ಆದರೆ ಎರಡೂ ಕಾಲುಗಳಿಗೆ ತೀವ್ರವಾಗಿ ಗಾಯವಾದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಡ್ರೈವರ್ ವಿರುದ್ಧ 279, 338, 304(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.