ಬೆಂಗಳೂರು: ಮನೆಯಲ್ಲಿ ಏಕಾಂಗಿಯಾಗಿದ್ದ ವೃದ್ಧೆಯ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಜ.3ರಂದು ವೈದ್ಯೆ ವೈಷ್ಣವಿ ಎಂದಿನಂತೆ ತಮ್ಮ ಕ್ಲಿನಿಕ್’ಗೆ ಹೋಗಿದ್ದಾಗ ಮನೆಯಲ್ಲಿ ವೈದ್ಯೆಯ ತಾಯಿಯ ಒಬ್ಬಂಟಿಯಾಗಿದ್ದರು. ಈ ವೇಳೆ ಮನೆಗೆ ನುಗ್ಗಿದ ದರೋಡೆಕೋರರು, ಆಕೆಯ ಕೈ-ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ದರೋಡೆ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಈ ವೇಳೆ ವೈದ್ಯೆಯ ಮನೆಗೆ ಕೆಲಸಕ್ಕೆ ಬರುತ್ತಿದ್ದಾಕೆಯ ತಂದೆ ಕಳ್ಳತನ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ದರೋಡೆ ಪ್ರಕರಣದ ಮುಖ್ಯ ಆರೋಪಿ ನಟರಾಜ್, ವೈದ್ಯೆಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಮಗಳನ್ನು ಮಾತನಾಡಿಸಲೆಂದು ಆಗಾಗ ಬಂದು ಹೋಗುತ್ತಿದ್ದ. ಈ ವೇಳೆ ಮನೆಯಲ್ಲಿ ತಾಯಿ ಮತ್ತು ಮಗಳು ಮಾತ್ರ ಇರುವುದು ಎಂಬುದನ್ನು ಅರಿತುಕೊಂಡು ದರೋಡೆ ಮಾಡಲು ಯೋಜನೆ ರೂಪಿಸಿಕೊಂಡಿದ್ದಾನೆ.
ವೈದ್ಯೆಯ ಮನೆಯಲ್ಲಿ ದರೋಡೆ ಮಾಡಲೆಂದು ತನ್ನ ಜೊತೆ ನಾಲ್ವರನ್ನು ಕರೆದುಕೊಂಡು ಬಂದಿದ್ದಾನೆ. ನಂತರ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಮೂರೂವರೆ ಲಕ್ಷ ರೂ ನಗದನ್ನು ಆರೋಪಿಗಳು ದೋಚಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.