ಮಂಗಳೂರು: ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.